ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪಿ ಶಿಕ್ಷಕನ ಬಂಧನ

ಕೊಲ್ಲೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 2ನೇ ತರಗತಿಯ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕನನ್ನು ಮಂಗಳವಾರ ಸಂಜೆ ಬಂಧಿಸಲಾಗಿದೆ. ಬಾಲಕಿಯ ತಾಯಿ ಜಯಲಕ್ಷ್ಮೀ ಎಂಬವರು ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. 

ಬಾಲಕಿಯ ತೊಡೆಯನ್ನು ತೀವ್ರವಾಗಿ ಚಿವುಟಿದ್ದಲ್ಲದೆ ಆಕೆಯೊಂದಿಗೆ ಅನುಚಿತವಾಗಿ ಶಿಕ್ಷಕ ವರ್ತಿಸಿದ್ದಾನೆ ಎಂಬ ದೂರಿನ ಹಿನ್ನೆಲೆಯಲ್ಲಿ ಕೊಲ್ಲೂರು ಪಿಎಸ್‌ಐ ಜಯಂತ್ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿಕೊಂಡು ಆರೋಪಿ ಶಿಕ್ಷಕ ಶಾಂತಪ್ಪ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಪೋಸ್ಕೊ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮೂಲತಃ ಉಡುಪಿಯವರಾಗಿರುವ ಶಿಕ್ಷಕ ಕಳೆದ 4 ವರ್ಷಗಳಿಂದ ಇಲ್ಲಿ ಸೇವೆಯಲ್ಲಿದ್ದಾನೆ. 

ಮಹಿಳಾ ಠಾಣೆಗೆ ಪ್ರಕರಣ ಹಸ್ತಾಂತರ: ಶಾಲಾ ಬಾಲಕಿಯ ಲೈಂಗಿಕ ಕಿರುಕುಳ ಪ್ರಕರಣವನ್ನು ಕುಂದಾಪುರ ಮಹಿಳಾ ಠಾಣೆಗೆ ವರ್ಗಾಯಿಸಲಾಗಿದೆ. ಮಂಗಳವಾರ ರಾತ್ರಿ ಇಲ್ಲಿನ ಮಹಿಳಾ ಠಾಣೆಯಲ್ಲಿ ಬಾಲಕಿ ಮತ್ತು ಆಕೆಯ ಹೆತ್ತವರ ಹೇಳಿಕೆ ಪಡೆದುಕೊಳ್ಳಲಾಗಿದೆ. ತಾಲೂಕು ದಂಡಾಧಿಕಾರಿ ಗಾಯತ್ರಿ ಎನ್.ನಾಯಕ್, ಸಹಾಯಕ ಕಮಿಷನರ್ ಚಾರುಲತಾ ಸೋಮಲ್ ಈ ಸಂದರ್ಭ ಹಾಜರಿದ್ದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com