ಕುಂದಾಪುರ: ಕೊಲ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 2ನೇ ತರಗತಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧಿಸಲ್ಪಟ್ಟ ದೈಹಿಕ ಶಿಕ್ಷಣ ಶಿಕ್ಷಕ ಶಾಂತಪ್ಪ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಡಿ. 17ರ ತನಕ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶಿಸಿದೆ.