ಕುಂಭಾಶಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಗೋವಾದಿಂದ ಮಣಿಪಾಲದ ಕಡೆಗೆ ಸಾಗುತ್ತಿದ್ದ ಬುಲೆಟೊಂದು ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಬೀಜಾಡಿ ಶಂಕರನಾರಾಯಣ ಗಾಣಿಗ ಅವರು ಗಂಭೀರವಾಗಿ ಗಾಯಗೊಂಡಿದ್ದು, ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಲೆಟ್ ಸವಾರ ರಾಜೇಶ್ ವಿರುದ್ಧ ಕುಂದಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.