ಗಂಗೊಳ್ಳಿ: ಮುಳ್ಳಿಕಟ್ಟೆ ಸಮೀಪದ ಮೊವಾಡಿ ಕ್ರಾಸ್ ಬಳಿ ಅಪರಿಚಿತ ವಾಹನವೊಂದು ಬೈಕಿಗೆ ಗುದ್ದಿದ ಪರಿಣಾಮ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು, ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ವರದಿಯಾಗಿದೆ. ಗಂಗೊಳ್ಳಿಯ ರಾಮದಾಸ ಖಾರ್ವಿ ಎಂಬವರ ಪುತ್ರ ಅವಿನಾಶ್ ಖಾರ್ವಿ(25) ಮೃತ ದುರ್ದೈವಿ.
ಅವಿನಾಶ ತನ್ನ ಸ್ನೇಹಿತನನ್ನು ಕುಂದಾಪುರಕ್ಕ ಡ್ರಾಪ್ ಮಾಡಿ ಮರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಕುಂದಾಪುರ ಸರಕಾರಿ ಆಸ್ಪತ್ರೆಗೆ ಸಾಗಿಸುವ ವೇಳೆಗಾಗಲೇ ಅವರು ಮೃತಪಟ್ಟಿದ್ದರು. ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.