ಅಪ್ರಾಪ್ತ ಬಾಲೆಯರ ಮೇಲೆ ಲೈಂಗಿಕ ದೌರ್ಜನ್ಯ. ಆರೋಪಿ ಬಂಧನ

ಕುಂದಾಪುರ: ತಾಲೂಕಿನ ಕೆಂಚನೂರು ಗ್ರಾಮದ ಇಬ್ಬರು ಅಪ್ರಾಪ್ತ ಹೆಣ್ಣ ಮಕ್ಕಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ವರದಿಯಾಗಿದೆ. ಅದೇ ಗ್ರಾಮದ ತಿಮ್ಮ(38) ಎಂಬಾತ ಈ ದುಷ್ಕೃತ್ಯ ಎಸಗಿದ್ದು, ದೂರಿನ ಆಧಾರದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 

ಘಟನೆಯ ವಿವರ:
ಕೆಂಚನೂರು ಗ್ರಾಮದ ಕಂಬಳಗದ್ದೆ ಎಂಬಲ್ಲಿಯ ಅಕ್ಕಪಕ್ಕದ ಮನೆಯ ನಾಲ್ಕು ಹಾಗೂ ಐದನೇ ತರಗತಿಗೆ ಸೇರಿರುವ ಮಕ್ಕಳಿಬ್ಬರು ಮನೆಯಲ್ಲಿ ಆಟವಾಡುತ್ತಿದ್ದಾಗ, ಕದ್ರಿಗುಡ್ಡೆಯ ತಿಮ್ಮ ಎಂಬಾತ ಅಲ್ಲಿಗೆ ಬಂದು ಮಕ್ಕಳಿಗೆ ಸಿನೆಮಾ ತೋರಿಸುವುದಾಗಿ ಆಮಿಷವೊಡ್ಡಿ ಮನೆಗೆ ಕರೆದೊದಿದ್ದಾನೆ. ಅಲ್ಲಿ ಸಿನೆಮಾ ತೋರಿಸುವ ಬದಲು ತನ್ನ ಮೊಬೈಲ್ ನಲ್ಲಿದ್ದ ಅಶ್ಲೀಲ ಚಿತ್ರಗಳನ್ನು ತೋರಿಸಿ, ಮಕ್ಕಳಿಬ್ಬರಿಗೂ ಹಾಗೆಯೇ ಮಾಡುವಂತೆ ಬಲವಂತ ಮಾಡಿದ್ದಾನೆ. ಈತನ ದುಷ್ಕೃತ್ಯದಿಂದ ಮಕ್ಕಳು ದೈಹಿಕವಾಗಿ ಬಳಲಿದ್ದರು. ಸಂಜೆಯ ವೇಳೆಗೆ ಮನೆಗೆ ಬಂದ ತಾಯಿಯ ಮಕ್ಕಳ ಸ್ಥಿತಿಯನ್ನು ನೋಡಿ ಪ್ರಶ್ನಿಸಿದಾಗ, ಮಕ್ಕಳು ನಡೆದ ವಿಚಾರವನ್ನು ವಿವರಿಸಿದ್ದಾರೆ. ತಕ್ಷಣ ಸ್ಥಳೀಯರ ಮೂಲಕ ಪೊಲೀಸರಿಗೆ ದೂರು ನೀಡಿದ್ದರು. ದೂರಿನನ್ವಯ ಆರೋಪಿ ತಿಮ್ಮನನ್ನು ಬಂಧಿಸಿ ಆತನ ಬಳಿ ಇದ್ದ ಮೊಬೈಲನ್ನು ವಶಪಡಿಸಿಕೊಂಡಿದ್ದಾರೆ.

ಮಕ್ಕಳನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಿ, ವೈದ್ಯಕೀಯ ಪರೀಕ್ಷೆಗೊಳಪಡಿಸಲಾಯಿತು. ಮಕ್ಕಳಿಬ್ಬರ ಹೇಳಿಕೆಯಂತೆ ಪ್ರಕರಣ ದಾಖಲಿಸಿಕೊಂಡು ತನಿಕೆ ನಡೆಸುತ್ತಿದ್ದಾರೆ.

ಮಕ್ಕಳು ಆಟವಾಡುತ್ತಿರುವ ತಂದೆ ತಾಯಿ ಮನೆಯಲ್ಲಿಲ್ಲದಿರುವುದನ್ನು ತಿಳಿದಿದ್ದ ಸಂದರ್ಭವನ್ನು ಆರೋಪಿ ದುರ್ಬಳಕೆಮಾಡಿಕೊಂಡಿದ್ದಾನೆ. 
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com