ಕುಂಭಾಸಿ: ರಾ.ಹೆ. 66ರಲ್ಲಿ ಕುಂಭಾಸಿ ಶ್ರೀ ಹರಿಹರ ದೇವಸ್ಥಾನಕೆ ಹೋಗುವ ಮಾರ್ಗದ ಎದುರು ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಯಾದ ಘಟನೆ ಮೇ 17ರಂದು ಅಪರಾಹ್ನ 3.30ರ ಸುಮಾರಿಗೆ ಸಂಭವಿಸಿದೆ.
ಮಲ್ಯಾಡಿಯಿಂದ ಕುಂದಾಪುರ ಕಡೆಗೆ ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಾಜಕಕ್ಕೆ ಢಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯ ತೀವ್ರತೆಗೆ ಲಾರಿ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು ಅದೃಷ್ಟವಶಾತ್ ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕ ಕೃಷ್ಣ ಮೂರ್ತಿ ಎಂದು ಗುರುತಿಸಲಾಗಿದೆ.