ಅಕ್ರಮ ದನ ಸಾಗಾಟ: ಆರೋಪಿಗಳು ಪರಾರಿ

ಬೈಂದೂರು:  ಭಟ್ಕಳದಿಂದ ಮಂಗಳೂರು ಕಡೆಗೆ ಸ್ಕಾರ್ಪಿಯೋ ವಾಹನವೊಂದರಲ್ಲಿ ಅಕ್ರಮವಾಗಿ ದನಗಳನ್ನು ಸಾಗಿಸುತ್ತಿದ್ದ ವೇಳೆ ಬೈಂದೂರು ಸಮೀಪದ ನಂದನವನ ಕ್ರಾಸ್ ಬಳಿ ತಡೆಗಟ್ಟಿದಾಗ ಆರೋಪಿಗಳು ವಾಹನವನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾದ ಘಟನೆ ವರದಿಯಾಗಿದೆ.

ಘಟನೆಯ ವಿವರ
ಭಟ್ಕಳದಿಂದ 9 ದನಗಳನ್ನು ತುಂಬಿಸಿಕೊಂಡು ಬರುತ್ತಿದ್ದ ಮಂಗಳೂರು ಕಡೆಗೆ ಹೊರಟಿದ್ದ ಸ್ಕಾರ್ಪಿಯೋ ವಾಹನವನ್ನು ಶಿರೂರು ಚೆಕ್ ಪೋಸ್ಟ್ ಬಳಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯು ಅಡ್ಡಗಟ್ಟಿಗಟ್ಟಿದಾಗ ವಾಹನವನ್ನು ನಿಲ್ಲಿಸದೇ ಚಲಾಯಿಸಿಕೊಂಡು ಬಂದುದರಿಂದ ಸಂಶಯಗೊಂಡ ಪೊಲೀಸ್ ಸಿಬ್ಬಂದಿಯು ಕೂಡಲೇ ಠಾಣೆಗೆ ಮಾಹಿತಿ ರವಾನಿಸಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಸಿಬ್ಬಂದಿಗಳು ವಾಹನವನ್ನು ಬೈಂದೂರು ಸಮೀಪದ ನಂದನವನದ ಬಳಿ ಅಡ್ಡಗಟ್ಟಿದಾಗ ಆರೋಪಿಗಳು ವಾಹನವನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ.
ಪೊಲೀಸರು ವಾಹನವನ್ನು ಪರಿಶೀಲಿಸಿದಾಗ 9 ದನಗಳಲ್ಲಿ 5 ದನಗಳು ಮೃತಪಟ್ಟು, ಉಳಿದ 3 ದನಗಳು ಪೊಲೀಸರ ವಶಕ್ಕೆ ಸಿಕ್ಕಿದ್ದರೇ, ಒಂದು ದನ ಓಡಿಹೋಗಿದೆ. 
ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಾಹನವನ್ನು ಪರಿಶೀಲಿಸಿ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com