ಬೈಂದೂರು: ಕಿರಿಮಂಜೇಶ್ವರ ಗ್ರಾಮದ ಮಸ್ಕಿಯ ಅರೆಹೊಳೆ ಕ್ರಾಸ್ ಬಳಿ ಶನಿವಾರ ರಾತ್ರಿ ಮಂಗಳೂರಿನಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು ಚಾಲಕ ಮತ್ತು ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ. ಎದುರಿನಿಂದ ಬರುತ್ತಿದ್ದ ವಾಹನಕ್ಕೆ ದಾರಿ ನೀಡಲು ಹೆದ್ದಾರಿಯ ಪಶ್ಚಿಮ ಅಂಚಿಗೆ ಸರಿದಾಗ ನಿಯಂತ್ರಣ ಕಳೆದುಕೊಂಡದ್ದು ಪಲ್ಟಿಯಾಗಲು ಕಾರಣ ಎಂದು ತಿಳಿದು ಬಂದಿದೆ.