
ರೂಪೇಶ್ ಭಂಡಾರಿ ತೆಕ್ಕಟ್ಟೆಯಿಂದ ಮನೆಗೆ ತೆರಳುತ್ತಿರುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಲಾರಿ, ಬೈಕ್ ಮತ್ತು ಸವಾರನನ್ನು ಸುಮಾರು ನೂರು ಮೀಟರ್ ದೂರಕೆ ಎಳೆದೊಯ್ದಿತ್ತು. ಈ ವೇಳೆ ಬೈಕ್ ಸವಾರ ಲಾರಿಯ ಅಡಿಯಲ್ಲಿ ಸಿಲುಕ್ಕಿದ್ದು, ಅವರನ್ನು ಹೊರತೆಗೆಯಲು ಸ್ಥಳೀಯರು ಹರಸಾಹಸಪಟ್ಟರು. ತೆಕ್ಕಟ್ಟೆ ಫ್ರೆಂಡ್ಸ್ ಆ್ಯಂಬುಲೆನ್ಸ್ ಮೂಲಕ ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ. ಮೃತರು ಅವಿವಾಹಿತರಾಗಿದ್ದು, ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ. ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.